ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪ್ಪೂರು ಗ್ರಾಮಸ್ಥರ ಪ್ರತಿಭಟನೆ

ಉಡುಪಿ: ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧಿಸಿ ಉಪ್ಪೂರು ಗ್ರಾಮಸ್ಥರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾಡಳಿತವು ಉಪ್ಪೂರಿನಲ್ಲಿ 9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ತಯಾರಿ ನಡೆಸಿದೆ. ಶೆಲ್ಟರ್ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೀದಿ ಬಾಯಿಗಳ ಕಾಟದಿಂದ ರೋಸಿ ಹೋಗಿದ್ದ ಜನರಿಗೆ ನೆಮ್ಮದಿ ಕಲ್ಪಿಸುವ ನಿಟ್ಟಿನಲ್ಲಿ ಈ […]