ವಿಜಯನಗರ ಜಿಲ್ಲೆ ರಚನೆಗೆ ವಿರೋಧ: ನ. 26ರಂದು ಬಳ್ಳಾರಿ ಜಿಲ್ಲೆ ಬಂದ್ ಗೆ ನಿರ್ಧಾರ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ನೂತನ ವಿಜಯನಗರ ಜಿಲ್ಲೆಗೆ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ಸಿಕ್ಕಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಯನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನ.26 ರಂದು ಬಳ್ಳಾರಿ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ಒಡೆಯಬೇಡಿ. ಆನಂದ ಸಿಂಗ್ ತಮ್ಮ ಸ್ವಾರ್ಥಕ್ಕಾಗಿ, ಹೊಸಪೇಟೆಯಿಂದ ಹಂಪಿವರೆಗಿನ ತಮ್ಮ ಭೂಮಿಗೆ ಉತ್ತಮ ಬೆಲೆ ಬರಲಿ ಅನ್ನೋ ಕಾರಣಕ್ಕೆ ಹೊಸ ಜಿಲ್ಲೆ‌ ರಚನೆಗೆ ಮುಂದಾಗಿದ್ದಾರೆ. ಜಿಲ್ಲೆ ಮಾಡೋದಿದ್ದರೆ […]