ನೂತನ ಕಾರ್ಮಿಕ ಸಂಹಿತೆಗೆ ವಿರೋಧ: ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ […]