ತ್ರಿಶಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ಮಂಗಳೂರು: ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ನ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಲೆಕ್ಕ ಪರಿಶೋಧಕ ಗೋಪಾಲಕೃಷ್ಣ ಭಟ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಎಂಬುದು ವಿದ್ಯಾರ್ಥಿಯಲ್ಲಿನ ಅಂತಃ ಶಕ್ತಿಯನ್ನು ಹೊರ ತರುವ ಸಾಧನವಾಗಿದೆ. ಪರಿಶ್ರಮದ ಮೂಲಕ ಮಾತ್ರ ಸಾಧನೆ ಎನ್ನುವುದು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜಿನ ಶೈಕ್ಷಣಿಕ ಆಡಳಿತ ಸಲಹೆಗಾರ ನಾರಾಯಣ್ […]