ಆಸ್ಕರ್ ಫೆರ್ನಾಂಡಿಸ್ ನಿಧನ: ಪೇಜಾವರ ಶ್ರೀ, ಶೋಭಾ ಕರಂದ್ಲಾಜೆ, ಸುನಿಲ್ ಕುಮಾರ್ ಸಂತಾಪ
ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ. ಆಸ್ಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದ್ದು, ಅವರ ನಿಧನದಿಂದ ನಾಡು ಓರ್ವ ಮುಸ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ. ಅವರು ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸಲ್ಲಿಸಿರುವ ಸೇವೆ ಅಪಾರವಾದುದು. ಅವರು ಪೇಜಾವರ ಮಠ ಸಹಿತ ಉಡುಪಿಯ ಎಲ್ಲ ಅಷ್ಟಮಠಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಮಠದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಆಸ್ಕರ್ ಅವರ ಆತ್ಮಕ್ಕೆ ಭಗವಂತನು […]