ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ. ಶಿವಕುಮಾರ್
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಆಸ್ಕರ್ ಫೆರ್ನಾಂಡಿಸ್ ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ವ್ಯಕ್ತಿ. ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು. ಕಾಂಗ್ರೆಸ್‌ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದರು. ಮಾಜಿ ಸಚಿವರಾದ ಪ್ರಮೋದ್ […]