ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ವಸತಿ ನಿಲಯಗಳಿಗೆ ಅಗತ್ಯ ವಸ್ತು ವಿತರಣೆ
ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ಮಿಷನ್ ಕಾಂಪೌಂಡ್‌ನ ಸಿ.ಎಸ್.ಐ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಏ ಗಫೂರ್ ಮಾತನಾಡಿ, ಆಸ್ಕರ್ ಫರ್ನಾಂಡಿಸ್ ಅವರು ನಡೆದು ಬಂದ ದಾರಿ ಮತ್ತು ಅವರ ಆದರ್ಶಗಳನ್ನು ವಿವರಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ […]
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಉಡುಪಿ: ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯತಿಥಿಯನ್ನು ಆಚರಿಸುವ ಸಲುವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮವನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಯಿತು. ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪುಣ್ಯತಿಥಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ […]
ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಪ್ರಥಮ ಪುಣ್ಯತಿಥಿ : ಕಾಂಗ್ರೆಸ್ ಭವನದಲ್ಲಿ ಪ್ರತಿಮೆ ಅನಾವರಣ
ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ರವರ ಪ್ರಥಮ ವರ್ಷದ ಪುಣ್ಯ ತಿಥಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಸ್ಕರ್ ಫರ್ನಾಂಡಿಸ್ ರವರ ಪ್ರತಿಮೆ ಅನಾವರಣ ಗೊಳಿಸಿದರು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭಾಷಣ – ರಸ ಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, […]