ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅಸ್ಮಿತಾಯ್ ಪ್ರದರ್ಶನ
ಅಮೇರಿಕಾದ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಿಗೆ ಕೊಂಕಣಿ ಸಿನೆಮಾ ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದೊಂದು […]
ಮಂಗಳೂರು: ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ
ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಆ. 13 ರಂದು ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಅನ್ನು ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಹಾಗೂ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. […]