100 ದಿನದ ದಾಖಲೆ ಬರೆದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಯಶಸ್ಸಿನ ಶತದಿನಾಚರಣೆ ಕಾರ್ಯಕ್ರಮ
ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು 100 ನೇ ದಿನದ ಮೈಲಿಗಲ್ಲನ್ನು ದಾಟಲಿದ್ದು, ಬಿಜೈ ನ ಭಾರತ್ ಸಿನೆಮಾದಲ್ಲಿ ಡಿ.23 ರಂದು ಸಂಜೆ 4 ಗಂಟೆಗೆ ಶತದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿಇದುವರೆಗೆ ಶತದಿನ ಪೂರೈಸಿದ ಪ್ರಥಮ ಸಿನೆಮಾ ಎಂದು ಅಸ್ಮಿತಾಯ್ ದಾಖಲೆ ಬರೆಯಲಿದೆ. ಈ ಬಗ್ಗೆ ಚಿತ್ರ ತಂಡವು ಡಿ.20ರಂದು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾಹಿತಿ ನೀಡಿದೆ. ಮುಂಬಯಿಯ ಉದ್ಯಮಿ ಹಾಗೂ ಶಿಕ್ಷಣ ಕ್ಷೇತ್ರದ ದಿಗ್ಗಜ […]