ಉಡುಪಿ: ಖಾಲಿ ಜಾಗದಲ್ಲಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಇಲ್ಲದಿದ್ದರೆ ದಂಡ ಕಟ್ಟಲು ರೆಡಿಯಾಗಿ.!
ಉಡುಪಿ: ಖಾಲಿ ಜಾಗಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆಯಲು ಸಂಬಂಧಪಟ್ಟ ಜಾಗದ ಮಾಲೀಕರಿಗೆ ಸೂಚಿಸಬೇಕು. ನಿಗದಿತ ಅವಧಿಯಲ್ಲಿ ಅವರು ತೆಗೆಯದಿದ್ದಲ್ಲಿ ದಂಡ ವಸೂಲು ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತ ಸಂಬಂಧದಲಪಟ್ಟ ನಗರಸಭಾ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತು ಸಂಬಂಧಪಟ್ಟ ವಾರ್ಡ್ ನ ಸದಸ್ಯರುಗಳು […]