ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ, ಇಲ್ಲದಿದ್ದರೆ ಪರೀಕ್ಷೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ನಡೆಸಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಈಗಿನ ತಾತ್ಕಾಲಿಕ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು. ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಜುಲೈ 3ನೇ […]