ಭ್ರಷ್ಟಾಚಾರ ಮಟ್ಟಹಾಕಲು ಯುವ ಸಮುದಾಯ ಕಾರ್ಯಪ್ರವೃತ್ತರಾಗಬೇಕು: ಲೋ.ನ್ಯಾ. ವಿಶ್ವನಾಥ್

ಉಡುಪಿ: ಭ್ರಷ್ಟಾಚಾರ ಎನ್ನುವುದು ಇಂದು ಸಮಾಜದಲ್ಲಿ ಕ್ಯಾನ್ಸರ್‌ನಂತೆ ಹರಡಿಕೊಂಡಿದ್ದು, ಅದನ್ನು ತಳಮಟ್ಟದಿಂದಲೇ ಮಟ್ಟಹಾಕುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯಪ್ರವೃತ್ತವಾಗಬೇಕು ಎಂದು ಲೋಕಾಯುಕ್ತ ನ್ಯಾಯಾಧೀಶ ಪಿ. ವಿಶ್ವನಾಥ ಶೆಟ್ಟಿ ಹೇಳಿದರು. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನೂತನ ಗ್ರಂಥಾಲಯ ‘ಜ್ಞಾನ ಸಿಂಧು’ ಅನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ವಕೀಲ ವೃತ್ತಿ ಸಮಾಜದಲ್ಲಿ ಬಹಳ ಪ್ರಭಾವ ಬೀರುವ ವೃತ್ತಿಯಾಗಿದೆ. ಬಡವರು, ಕಾರ್ಮಿಕರಿಂದ ಹಿಡಿದು ಅಧಿಕಾರಿಗಳು, ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿಗಳವರೆಗೆ ಎಲ್ಲರೂ ಕೂಡ ವಕೀಲರ […]