ಜುಲೈ 4ರಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್ ಅವರು, ಈ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮತ್ತು ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ ಅವರು […]