ನ. 21 ರಿಂದ ಭತ್ತ ಖರೀದಿ ನೋಂದಣಿ; ಡಿಸೆಂಬರ್ 1 ರಿಂದ 2023 ಫೆಬ್ರವರಿ 28 ರವರೆಗೆ ಭತ್ತ ಖರೀದಿ ಕಾರ್ಯ
ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ 2040 ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ4 ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು […]
ನವೆಂಬರ್ 21 ರಿಂದ ಭತ್ತ ಖರೀದಿ ನೋಂದಣಿ ಕೇಂದ್ರ ಆರಂಭ: 7 ಕಡೆಗಳಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪನೆ
ಉಡುಪಿ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ಮಂಗಳವಾರದಂದು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಲಾಯಿತು. ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ನವೆಂಬರ್ 21 ರಿಂದ ನೋಂದಣಿ ಕೇಂದ್ರಗಳನ್ನು ತೆರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯವಾಗಿ ಬೆಳೆಯುವ ಭತ್ತದ ತಳಿಗಳಾದ ಕಜೆ,ಜಯ,ಜ್ಯೋತಿ,ಪಂಚಮುಖಿ,ಸಹ್ಯಾದ್ರಿ, ಉಷಾ,ಅಭಿಲಾಷ,ಎಂಓ4 ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿದ್ದು,ಸಾಮಾನ್ಯ ಭತ್ತಕ್ಕೆ ರೂ.2540.00 ದರ ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ […]
ಅತಿವೃಷ್ಟಿಯಿಂದ ಬೆಳೆ ಹಾನಿ: ಮರುಬಿತ್ತನೆಗೆ ಅಲ್ಪಾವಧಿ ತಳಿಗಳ ಬೀಜ ಲಭ್ಯ
ಉಡುಪಿ: ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಉಂಟಾದ ಅತಿವೃಷ್ಠಿಯಿಂದಾಗಿ ಭತ್ತದ ಬೆಳೆ ಹಾನಿಯಾಗಿದ್ದು, ಭತ್ತದ ಬೆಳೆ ಹಾನಿಯಾದ ತಾಕುಗಳಲ್ಲಿ ರೈತರು ಅಲ್ಪಾವಧಿ ತಳಿಗಳಾದ ಜ್ಯೋತಿ ಹಾಗೂ ಮಧ್ಯಮಾವಧಿ ತಳಿಯಾದ ಉಮಾ ಬಿತ್ತನೆ ಬೀಜಗಳನ್ನು ಮರುಬಿತ್ತನೆಗೆ ಬಳಸಬಹುದಾಗಿದ್ದು, ಈ ತಳಿಗಳ ಬಳಕೆಯಿಂದ ನಿಗದಿತ ಅವಧಿಯಲ್ಲಿ ಬೆಳೆ ಪಡೆದು ಕಟಾವು ಕಾರ್ಯ ಕೈಗೊಳ್ಳಬಹುದಾಗಿದೆ. ಕೃಷಿ ಇಲಾಖೆಯಿಂದ ಬಿತ್ತನೆ ಬೀಜವನ್ನು ಪಡೆಯದ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ, ಅಲ್ಪಾವಧಿ ತಳಿಗಳನ್ನು ಪಡೆದು ಮರು ಬಿತ್ತನೆ ಮಾಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ […]
ರಬಿ ಋತುವಿನಲ್ಲಿ 187 ಲಕ್ಷ ಮೆಟ್ರಿಕ್ ಟನ್ ಗೋಧಿ, 860 ಲಕ್ಷ ಮೆಟ್ರಿಕ್ ಟನ್ ಭತ್ತ ಸಂಗ್ರಹಿಸಿದ ಸರಕಾರ
ನವದೆಹಲಿ: ರಬಿ ಮಾರುಕಟ್ಟೆ ಋತು 2022-23 ರಲ್ಲಿ ಸರಕಾರವು ಇದುವರೆಗೆ 187 ಲಕ್ಷ 86 ಸಾವಿರ ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಿದೆ. ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 37 ಸಾವಿರದ ಎಂಟುನೂರ ಐವತ್ತೆರಡು ಕೋಟಿಗೂ ಹೆಚ್ಚಾಗಿದ್ದು, ಸುಮಾರು 17 ಲಕ್ಷ 85 ಸಾವಿರ ರೈತರು ಇದರ ಪ್ರಯೋಜನ ಪಡೆದಿದ್ದಾರೆ. ಖಾರಿಫ್ ಬೆಳೆ 755 ಲಕ್ಷ ಮೆಟ್ರಿಕ್ ಟನ್ ಮತ್ತು ರಬಿ ಬೆಳೆ 105 ಲಕ್ಷ ಮೆಟ್ರಿಕ್ ಟನ್ ಸೇರಿದಂತೆ 860 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು […]