ಮಧುರೈನಿಂದ ಮೌಂಟೇನ್ ವ್ಯೂನತ್ತ ಪಯಣಿಸಿದ ಸುಂದರ್ ಪಿಚೈಗೆ ಪದ್ಮಭೂಷಣ ಪ್ರಶಸ್ತಿಯ ಗರಿ
ಸ್ಯಾನ್ ಫ್ರಾನ್ಸಿಸ್ಕೋ: ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರಿಗೆ ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ವ್ಯಾಪಾರ ಮತ್ತು ಉದ್ಯಮ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. ಯುಎಸ್ ನಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಪಿಚೈ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು, ಇದು ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪದ್ಮಭೂಷಣ ಹಸ್ತಾಂತರಿಸಲು ಸಂತೋಷವಾಗಿದೆ. ಮಧುರೈನಿಂದ ಮೌಂಟೇನ್ ವ್ಯೂಗೆ ಅವರ ಸ್ಪೂರ್ತಿದಾಯಕ ಪ್ರಯಾಣ, ಭಾರತ-ಅಮೆರಿಕಾ ಆರ್ಥಿಕ […]