ಈಶಾನ್ಯ ರಾಜ್ಯಗಳ ಮಾಜಿ ರಾಜ್ಯಪಾಲ ಪದ್ಮನಾಭ ಬಾಲಕೃಷ್ಣ ಆಚಾರ್ಯ ಇವರಿಗೆ ನುಡಿನಮನ

ಉಡುಪಿ: ಪದ್ಮನಾಭ ಬಾಲಕೃಷ್ಣ ಆಚಾರ್ಯ ಇವರು ಉಡುಪಿ ಯಲ್ಲಿ ಹುಟ್ಟಿ ಬೆಳೆದು ವಿದ್ಯಾಭ್ಯಾಸ ಮುಗಿಸಿ ರಾಜಕೀಯ ಜೀವನದಲ್ಲಿ ಮುಂದೆ ಸಾಗಿ ನಾಗಾಲ್ಯಾಂಡ್, ಮಣಿಪುರ, ಅಸ್ಸಾಂ, ತ್ರಿಪುರ, ಅರುಣಾಚಲ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಸಂಘ ಪರಿವಾರ ಹಾಗೂ ಬಿಜೆಪಿಯ ಹಿರಿಯ ನಾಯಕ ಪದ್ಮನಾಭ ಬಾಲಕೃಷ್ಣ ಆಚಾರ್ಯರಿಗೆ ಉಡುಪಿ ತೆಂಕಪೇಟೆಯ ಆಚಾರ್ಯ ಮಠದಲ್ಲಿ ಬುಧವಾರ ನುಡಿನಮನ ಸಲ್ಲಿಸಲಾಯಿತು. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಕಳುಹಿಸಿದ ಶ್ರದ್ಧಾಂಜಲಿ ಸಂದೇಶ ವಾಚಿಸಿದ ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್ […]