ಪದ್ಮಾಸಿನಿ ಉದ್ಯಾವರ ಅವರಿಗೆ ಮೂರು ಚಿನ್ನದ ಪದಕಗಳೊಂದಿಗೆ ಪ್ರಥಮ ರ‍್ಯಾಂಕ್
ಉಡುಪಿ: ಉಡುಪಿ ತಾಲ್ಲೂಕಿನ ಪದ್ಮಾಸಿನಿ ಉದ್ಯಾವರ ಅವರು ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಜಾನಪದ ವಿಭಾಗದಲ್ಲಿ ಮೂರು ಚಿನ್ನದ ಪದಕಗಳೊಂದಿಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಅ. 19ರಂದು ನಡೆದ ಮೈಸೂರು ವಿಶ್ವವಿದ್ಯಾಲಯದ 100ನೇ ವರ್ಷದ ಘಟಿಕೋತ್ಸವ ಸಮಾರಂಭದಲ್ಲಿ ಪದ್ಮಾಸಿನಿ ಅವರಿಗೆ ವಿವಿಯು ಚಿನ್ನದ ಪದಕಗಳನ್ನು ಪ್ರದಾನ ಮಾಡಿದೆ. ಇವರು ಪ್ರಸ್ತುತ ಶಿರ್ವ ಸೈಂಟ್ ಮೇರಿಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.