ಪಡುಬಿದ್ರೆ: ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

ಪಡುಬಿದ್ರೆ: ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ಪೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರೆ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶದ ವಾಣಿಜ್ಯ ಬ್ಯಾಂಕ್‍ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘ, […]