ಮರಕ್ಕೆ ಕಟ್ಟಿ ಹಾಕಿ ಸುಲಿಗೆ, ಕೊಲೆ ಬೆದರಿಕೆ – ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿ, ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರು ಇನ್ನಾ ಗ್ರಾಮದ ಮೈಕ್ರೋವೇವ್‌ ಸ್ಟೇಶನ್‌ಗೆ ಎ. 17ರಂದು ಹೋಗಿದ್ದಾಗ ಸ್ಥಳೀಯ ಆರೋಪಿಗಳಾದ ಶೈಲೇಶ್‌, ವಿಠ್ಠಲ್, ರಂಜಿತ್‌ ಹಾಗೂ ಇನ್ನಿಬ್ಬರು ಕೈಯಿಂದ, ಮರದ ಸೋಂಟೆಯಿಂದ, ಹೆಲ್ಮೆಟ್‌, ಬೆಲ್ಟ್‌ಗಳಿಂದ ಹೊಡೆದು ಅಲ್ಲೇ ಮರವೊಂದಕ್ಕೆ ಕಟ್ಟಿಹಾಕಿ, ಮೊಬೈಲ್‌, ಪರ್ಸ್‌ ಹಾಗೂ ಬೈಕಿನ ಕೀಯನ್ನು ಕಿತ್ತುಕೊಂಡು ಪರ್ಸ್‌ನಲ್ಲಿದ್ದ 3000 ರೂ.ಗಳನ್ನು ಸುಲಿಗೆ ಮಾಡಿ, ಕೊಲೆ ಬೆದರಿಕೆಯನ್ನು ಒಡ್ಡಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಸ್ಮಿ ನಾರಾಯಣ ಅವರ ತಂದೆಯ ತಂಗಿ […]