ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರಕ್ಕೆ ಚಾಲನೆ
ಪಡುಬಿದ್ರಿ: ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸುತ್ತಿರುವ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರದ ಅಂಗವಾಗಿ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ನಿಂದ ಕಾಪು ಕಡಲ ತೀರದವರೆಗೆ ನಡೆದ ಕಡಲ ತೀರದ ಚಾರಣಕ್ಕೆ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಉತ್ತಮ ನಾಗರಿಕರಾಗುವಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಚಳುವಳಿಗಳು ಮಹತ್ತರ ಪಾತ್ರ ವಹಿಸುತ್ತವೆ. ಚಾರಣದ ಪೂರ್ಣ ಅನುಭವವನ್ನು ಪಡೆದುಕೊಳ್ಳುವಂತೆ […]