ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿದ 10 ಪೊಲೀಸರಿಗೆ ಕೊರೊನಾ ಪಾಸಿಟಿವ್; ಪಡುಬಿದ್ರಿ ಠಾಣೆ ಸೀಲ್ ಡೌನ್
ಕಾಪು: ಪಡುಬಿದ್ರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಹಿತ 10 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಪೊಲೀಸರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು, ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಠಾಣೆಯಲ್ಲಿ ಕೆಲವು ದಿನಗಳ ಹಿಂದೆ ಪೊಲೀಸರೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ಔತಣಕೂಟ ಏರ್ಪಡಿಸಲಾಗಿತ್ತು. ಈ ಸಮಾರಂಭ ನಡೆದ ವಾರದೊಳಗೆ ಸಿಬ್ಬಂದಿಯೊಬ್ಬರಿಗೆ ಜ್ವರ ಕಾಣಿಸಿಕೊಂಡಿದ್ದು, ಕೋವಿಡ್ ಪರೀಕ್ಷೆ […]