ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಸಮಾವೇಶ
ಪಡುಬಿದ್ರಿ: ಪಡುಬಿದ್ರಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶವು ಪಡುಬಿದ್ರಿ ಉದಯಾದ್ರಿಯಲ್ಲಿ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೂ ರಾಷ್ಟ್ರೀಯ ಅಧ್ಯಕ್ಷರಿಗೂ ಸಮಾನ ಗೌರವವಿದ್ದು ಅದನ್ನು ಬೂತ್ ಅಧ್ಯಕ್ಷರು ಅರ್ಥ ಮಾಡಿಕೊಂಡು ಪ್ರತೀ ಬೂತ್ ನಲ್ಲಿ ಅಧ್ಯಕ್ಷರುಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು. ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಪ್ರತೀ ಬೂತ್ ಅಧ್ಯಕ್ಷರ ಮನೆಯಲ್ಲಿ ಕನಿಷ್ಠ 30-40 ಜನ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕು. ತನ್ಮೂಲಕ ಪ್ರತೀ ಬೂತ್ ಅಧ್ಯಕ್ಷರು […]