ಜುಲೈ 3 ರಿಂದ ಸೆ. 29 ವರೆಗೆ ಆನೆಗುಂದಿ ಮಹಾಸಂಸ್ಥಾನದ ಜಗದ್ಗುರುಗಳ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ
ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ವರೆಗೆ ಶ್ರೀ ಸರಸ್ವತೀ ಸತ್ಸಂಗ ಮಂದಿರ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಜರುಗಲಿದೆ. ಜುಲೈ 15 ರಂದು ಆನೆಗುಂದಿ ಶ್ರೀಗಳವರ ಜನ್ಮ ವರ್ಧಂತಿ ಹಾಗೂ ಶ್ರೀ ನಾಗಧರ್ಮೇಂದ್ರ ಸರಸ್ವತೀ ವಿದ್ಯಾರ್ಥಿ ಭವನ ಉದ್ಘಾಟನೆ ನಡೆಯಲಿದೆ.