ಪಾದೂರು-ಕಳತ್ತೂರು: ಶ್ರೀ ಬ್ರಹ್ಮಬೈದೆರುಗಳ ಗರಡಿ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ಪಾದೂರು-ಕಳತ್ತೂರು ಶ್ರೀ ಬ್ರಹ್ಮಬೈದೆರುಗಳ ಗರಡಿಯ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಳಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದಿನಾಂಕ 22-02-2026ರ ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಭಕ್ತಿಭಾವ ಹಾಗೂ ಸಡಗರದ ವಾತಾವರಣದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ಘಟಕದ ಅಧ್ಯಕ್ಷರಾದ ಪುಂಡಲೀಕ ಮರಾಟೆ ಅವರು ಇತರ ಗಣ್ಯ ಅತಿಥಿಗಳೊಂದಿಗೆ ಸೇರಿ ಬ್ರಹ್ಮಕಳಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಈ ಶುಭ ಸಂದರ್ಭದಲ್ಲಿ ಉಭಯ ಗ್ರಾಮದ ಗುತ್ತುಬರ್ಕೆ ನಟ್ಟಿಲ್ಲ ಮನೆಯ […]