ಅಕ್ರಮ ಗೋಸಾಗಾಟ ತಡೆದವರ ಮೇಲೆ ವಾಹನ ಚಲಾಯಿಸಿದ ದುರ್ಘಟನೆಗೆ ಪೇಜಾವರ ಶ್ರೀ ಖಂಡನೆ

ಉಡುಪಿ: ತೀರ್ಥಹಳ್ಳಿಯ ಬಿಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟವನ್ನು ತಡೆಯಲೆತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತ ರ ಮೇಲೆ ವಾಹನ ಚಲಾಯಿಸಿ ಮಾರಣಾಂತಿಕ ದುಷ್ಕೃತ್ಯ ನಡೆಸಿರುವ ಘಟನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಿಜಕ್ಕೂ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಈ ರೀತಿ ಸವಾಲೆಸೆಯುವ ದುರುಳರ ವಿರುದ್ಧ ಸರ್ಕಾರ ಗಂಭೀರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಗೋಹತ್ಯಾನಿಷೇಧ ಕಾನೂನು ಕೇವಲ ಜಾರಿಗೆ ತಂದು ಪ್ರಯೋಜನವಿಲ್ಲ. ಅದರ ಪರಿಣಾಮಕಾರಿ ಅನುಷ್ಠಾನ ಆಗಬೇಕು. ಸರ್ಕಾರಗಳು ಈ ಬಗ್ಗೆ ಪೂರ್ಣ ಇಚ್ಛಾಶಕ್ತಿ […]