ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸ: “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ; ಉಗ್ರರ ದಾಳಿಗೆ ಪ್ರಧಾನಿ ಮೋದಿ ಖಂಡನೆ

ಪಹಲ್ಗಾಮ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ಉಗ್ರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿ ತಾಣದಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಕ್ಕೆ ನ್ಯಾಯ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ. ಉಗ್ರರ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ […]