‘ನಂಗ್ ಇಲ್ ಇಪ್ಪುಕ್ ಆತಿಲ್ಲ ಅಮ್ಮ’ ಎಂದು ಕಣ್ಣೀರಿಟ್ಟ ದೇಶವಿರೋಧಿ ಘೋಷಣೆ ಕೂಗಿದ ರಾಘವೇಂದ್ರ: ಜಿಲ್ಲಾ ಸರ್ಜನ್ ನಿಗಾಕ್ಕೆ ಹಸ್ತಾಂತರಿಸಿ ಕೋರ್ಟ್ ಆದೇಶ

ಕುಂದಾಪುರ: ಇಲ್ಲಿನ ಮಿನಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ನ್ಯಾಯಾಂಗ ಬಂಧನದಲ್ಲಿದ್ದ ರಾಘವೇಂದ್ರ ಗಾಣಿಗನನ್ನು ಬುಧವಾರ ಬೆಳಿಗ್ಗೆ ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನನ್ನು ಜಿಲ್ಲಾ ಸರ್ಜನ್ ನಿಗಾಕ್ಕೆ ಹಸ್ತಾಂತರಿಸಿದೆ. ಪಾಕ್ ಪರ ಘೋಷಣೆ ಕೂಗಿದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗನಿಗೆ ಯಾರದ್ದಾದರೂ ಪ್ರೇರಣೆ ಇದೆಯೇ ಎಂಬಿತ್ಯಾದಿ ವಿಚಾರದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯ ಆತನ ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಆರೋಪಿ ರಾಘವೇಂದ್ರ ಗಾಣಿಗನನ್ನು ಮಾರ್ಚ್ […]