ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು; ಪಾಕ್ ಗೆ10 ವಿಕೆಟ್ ಗಳ ಗೆಲುವು
ದುಬೈ: ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ನಡೆದ ಲೀಗ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ) ಇದೇ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಸೋಲಿನ ಮುಖಭಂಗಕ್ಕೊಳಗಾಗಿದೆ. ಈ ಹಿಂದಿನ 12 ಪಂದ್ಯಗಳಲ್ಲಿ ಭಾರತ ಗೆಲುವು ದಾಖಲಿಸಿತ್ತು. ಆದರೆ ಇಂದು ನಡೆದ ಪಂದ್ಯದಲ್ಲಿ ಪಾಕ್ ವಿರುದ್ಧ ಸೋಲು ಕಾಣುವ ಮೂಲಕ ಅಜೇಯ ಓಟಕ್ಕೆ ಕಡಿವಾಣ […]