ಏಷ್ಯಾಕಪ್ ಟಿ20: ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಭಾರತ

ನಿನ್ನೆ ರಾತ್ರಿ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟ್ವೆಂಟಿ-20 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ 19.5 ಓವರ್ ಗಳಲ್ಲಿ147 ರನ್‌ಗಳಿಗೆ ಆಲೌಟ್ ಆಯಿತು, ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ 43 ರನ್‌ಗಳು ತಂಡದ ಗರಿಷ್ಠ ಸ್ಕೋರ್ ಆಗಿದ್ದವು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮೂರು ಮತ್ತು ಅರ್ಷದೀಪ್ ಸಿಂಗ್ […]
ಪಾಕ್ ಗೆ ಬಿಗ್ ಶಾಕ್: ಉಗ್ರರ ಅಡ್ಡಾ ಚೆಲ್ಲಾಡಿದ ಭಾರತ, ಉಗ್ರರನ್ನು ಮಟಾಶ್ ಮಾಡಿತು ಸೇನೆ

ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಮಂಗಳವಾರ ಮುಂಜಾವಿನ ವೇಳೆ ಧ್ವಂಸಗೊಳಿಸಿದೆ. ಗಡಿ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ ಎನ್ನಲಾಗಿದೆ.ಅಲ್ಲಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ದಿಟ್ಟ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದೆ.