ಪಹಲ್ಗಾಮ್’ನಲ್ಲಿ ಉಗ್ರರ ಗುಂಡಿನ ದಾಳಿ: ಇಬ್ಬರು ಕನ್ನಡಿಗರು ಸೇರಿದಂತೆ 28 ಕ್ಕೂ ಹೆಚ್ಚು ಪ್ರವಾಸಿಗರು ಮೃತ್ಯು.

ಪಹಲ್ಗಾಮ್: ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕಂಡ ಕಂಡಲ್ಲಿ ವಿಶೇಷವಾಗಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದೇಶಿಗರು ಸೇರಿದ್ದಾರೆ. ನೋಡ ನೋಡುತ್ತಿದ್ದಂತೆ ಹೆಣಗಳ ರಾಶಿ […]