232 ಪ್ಯಾಲೆಸ್ಟೀನ್ ಜನ ಸಾವು, ಹಮಾಸ್‌ ನಾಯಕನ ಮನೆ ಹೊಕ್ಕ ಫೈಟರ್‌ಜೆಟ್‌ : ಇಸ್ರೇಲ್​ ಪ್ರತಿದಾಳಿ

ರಮಾಲ್ಲಾಹ (ಪ್ಯಾಲೆಸ್ಟೀನ್​): ಪ್ಯಾಲೆಸ್ಟೀನ್​ ಉಗ್ರಗಾಮಿ ಪಡೆಯ ಹಮಾಸ್​ ದಾಳಿಗೆ ಇಸ್ರೇಲ್​ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್​ ನಡೆಸಿದ ಪ್ರತಿದಾಳಿಯಲ್ಲಿ ಸುಮಾರು 232 ಪ್ಯಾಲೆಸ್ಟೀನಿಯನ್​ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ, ಹಮಾಸ್ ನಾಯಕರನ್ನೂ ಇಸ್ರೇಲ್​ ರಕ್ಷಣಾ ಪಡೆ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ.ಹಮಾಸ್​ ಉಗ್ರಗಾಮಿಗಳ ದಾಳಿಗೆ ಇಸ್ರೇಲ್​ ಪ್ರತಿದಾಳಿ ನಡೆಸುತ್ತಿದ್ದು, ಗಾಜಾ ಪಟ್ಟಿಯಲ್ಲಿ ಸುಮಾರು 232 ಪ್ಯಾಲೆಸ್ಟೀನಿಯನ್​ಗಳು ಸಾವನ್ನಪ್ಪಿದ್ದಾರೆ ಅಲ್ಲದೇ, ಅನೇಕ ಇಸ್ರೇಲ್​ ನಾಗರಿಕರು ಹಾಗೂ ಸೇನಾ ಸಿಬ್ಬಂದಿಯನ್ನು ಹಮಾಸ್​ ಭಯೋತ್ಪಾದಕರು ಗಾಜಾಕ್ಕೆ ಅಪಹರಿಸಿದ್ದಾರೆ ಎಂದು ವರದಿಯಾಗಿದೆ. […]