ಮೇ 12ರಂದು ಪಲಿಮಾರು ಶ್ರೀಗಳ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯ ಶಿಷ್ಯ ಸ್ವೀಕಾರ

ಉಡುಪಿ: ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಶಿಷ್ಯ ಸ್ವೀಕಾರಕ್ಕೆ ನಿರ್ಧರಿಸಿದ್ದು, ಪಲಿಮಾರು ಮೂಲ ಮಠದಲ್ಲಿರುವ ಯೋಗ ದೀಪಿಕಾ ಗುರುಕುಲದ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಅವರು ಮಠದ 31 ಉತ್ತರಾಧಿಕಾರಿಯಾಗಿ ಮೇ 12ರಂದು ಶಿಷ್ಯ ಸ್ವೀಕಾರ ಮಾಡಲಿದ್ದಾರೆ. ಕೊಡವೂರು ಕಂಬಳಕಟ್ಟ ಮೂಲದ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಅವರು ಪಲಿಮಾರು ಯೋಗ ದೀಪಿಕಾ ಗುರುಕುಲದಲ್ಲಿ ನಾಲ್ಕನೇ ವರ್ಷದ ವೇದಾಧ್ಯಯನ ಮಾಡುತ್ತಿದ್ದು, ಸನ್ಯಾಸ ಸ್ವೀಕಾರದ ಬಳಿಕ ಪಲಿಮಾರು ಶ್ರೀಗಳಲ್ಲಿ ಉನ್ನತ ಅಧ್ಯಯನ ಮುಂದುವರಿಸಲಿದ್ದಾರೆ. ಶಿಬರೂರಿನಲ್ಲಿ 1956ರಲ್ಲಿ ಜನಿಸಿದ ಪಲಿಮಾರು ಸ್ವಾಮೀಜಿಯವರಿಗೆ ಪ್ರಸಕ್ತ […]

ಮಾ.13ರಿಂದ ಶ್ರೀಕೃಷ್ಣಮಠದ ಗರ್ಭಗುಡಿ ಮೇಲ್ಛಾವಣಿಗೆ ಚಿನ್ನದ ತಗಡು ಅಳವಡಿಕೆ ಕಾರ್ಯ ಆರಂಭ

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದ ಗರ್ಭಗುಡಿಯ ಮೇಲ್ಛಾವಣಿಗೆ ಬಂಗಾರದ ಹೊದಿಕೆ ಅಳವಡಿಸುವ ಕಾರ್ಯ ಮಾ. 13ರಿಂದ ಆರಂಭಗೊಳ್ಳಲಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಉಡುಪಿ ಶ್ರೀಕೃಷ್ಣಮಠದ ಕನಕ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಗರ್ಭಗುಡಿಯ ಮೇಲ್ಛಾವಣಿ ನವೀಕರಣ ಕಾರ್ಯಕ್ಕೂ ಮುಂಚೆ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಆ ಬಳಿಕ ಗರ್ಭಗುಡಿಯ ಶಿಖರ ಕಲಶವನ್ನು ಕೆಳಗಿಳಿಸಿ ಚಿನ್ನ ಲೆಪಿತ ತಗಡು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಈ ನವೀಕರಣ ಕಾರ್ಯಕ್ಕೂ […]

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ, ಧಾರ್ಮಿಕ ಸಂವಿಧಾನ ಮುರಿಯುವುದು ಸರಿಯಲ್ಲ: ಪಲಿಮಾರು ಶ್ರೀ

ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಧಾರ್ಮಿಕ ಸಂವಿಧಾನವನ್ನು ಮುರಿಯುವುದು ಸರಿಯಲ್ಲ ಎಂದು ಪರ್ಯಾಯ ‍ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ. ನಿರ್ದಿಷ್ಟ ವಯೋಮಾನದ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ನಿಯಮಗಳಿವೆ. ಭಕ್ತಿಯಿಂದ ದೇವಸ್ಥಾನ ಪ್ರವೇಶಿಸಿದರೆ ತಪ್ಪಲ್ಲ, ಬಲಾತ್ಕಾರದಿಂದ ದೇವಸ್ಥಾನ ಪ್ರವೇಶಿಸಬಾರದು ಎಂದರು. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಶಿಷ್ಟಾಚಾರಗಳಿದ್ದು, ಅದನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಹಾಗೆಯೇ ಧರ್ಮಕ್ಷೇತ್ರಗಳಲ್ಲಿ ಧಾರ್ಮಿಕ ಸಂವಿಧಾನ ಅಸ್ತಿತ್ವದಲ್ಲಿದೆ. […]