ಪಲಿಮಾರು ಮಠದ 31ನೇ ವಿದ್ಯಾರಾಜೇಶ್ವರತೀರ್ಥ ಯತಿಗಳಿಗೆ ಮಾಲಿಕೆ ಮಂಗಳಾರತಿ

ಉಡುಪಿ: ಪಲಿಮಾರು ಮಠದ 31 ನೇ ಯತಿಗಳಾಗಿ ಶ್ರೀ ವಿದ್ಯಾರಾಜೇಶ್ವರತೀರ್ಥ ಪಟ್ಟಾಭಿಷೇಕ ನಂತರ ಇಂದು ರಾಜಾಂಗಣದಲ್ಲಿ ಪರ್ಯಾಯ ಮಠದ ವತಿಯಿಂದ ಮಠಾಧೀಶರುಗಳಿಗೆ ದಿವಾನರಾದ ವೇದವ್ಯಾಸ ತಂತ್ರಿಗಳು ಮಾಲಿಕೆ ಮಂಗಳಾರತಿ ಮಾಡಿದರು. ನಂತರ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಪೇಜಾವರ ಹಿರಿಯ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರಿಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರಿಪಾದರು,ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರಿಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ […]