ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ದೇವೇಗೌಡ ದಂಪತಿ 

ಉಡುಪಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಪತ್ನಿ ಚೆನ್ನಮ್ಮ ಅವರೊಂದಿಗೆ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ದೇವೇಗೌಡರು, ಮಠದ ಸುವರ್ಣ ಗೋಪುರ ಯೋಜನೆ ಬಗ್ಗೆ ತಿಳಿದುಕೊಂಡರು. ಬಳಿಕ ಪರ್ಯಾಯ ಪಲಿಮಾರು ಶ್ರೀವಿದ್ಯಾ ಧೀಶ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುಖಂಡರಾದ ಶಾಲಿನಿ […]

ಶ್ರೀ ಕೃಷ್ಣ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ  ಜೆ.ಡಿ .ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ,ವಿಧಾನ ಪರಿಷತ್ ಸದಸ್ಯ ಬೋಜೆ ಗೌಡ, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಉತ್ತರಾಧಿಕಾರಿಯಾಗಿ ಶ್ರೇಷ್ಠ  ವಟು  ದೊರಕಿದ್ದಾನೆ: ಪಲಿಮಾರು ಶ್ರೀ

ಉಡುಪಿ: ನಮಗೆ ಗುರುಗಳು ನೀಡಿದ ಭಾಗ್ಯ ಎರಡು ಒಂದು ಸನ್ಯಾಸ ಮತ್ತೊಂದು ಶ್ರೀ ಕೃಷ್ಣ ದೇವರು, ಶ್ರೀ ರಾಮ ದೇವರ ಪೂಜೆಯೊಂದಿಗೆ ಪಾಠಪ್ರವಚನ. ಇದು ನಿರಂತರವಾಗಿ ಬೆಳೆಯ ಬೇಕು ಮತ್ತು ಬೆಳಸಬೇಕು ಎಂದು ಉಡುಪಿಯ ಪಲಿಮಾರು ಶ್ರೀಗಳು ಹೇಳಿದ್ದಾರೆ. ‌ಅವರು ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸನ್ಯಾಸ ಎಂದರೆ ಕೇವಲ ಕಾಷಾಯ ವಸ್ತ್ರ ಬದಲಾವಣೆಯಲ್ಲ ಮಾನಸಿಕವಾದ ಪಕ್ವಾತೆಯೊಂದಿಗೆ ಪೂರ್ಣ ವಿರಕ್ತಿ ಭಾವ. ಅದು ಇದ್ದಲ್ಲಿ ಮಾತ್ರ ಸನ್ಯಾಸಕ್ಕೆ ಅರ್ಥವಿದೆ. ಇಂತಹ ಸನ್ಯಾಸದಿಂದಲೇ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ […]