ಪಳ್ಳಿ: ಟಿಪ್ಪರ್- ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ.

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಪಳ್ಳಿ ಗರಡಿ ಸಮೀಪ ಸಂಭವಿಸಿದೆ. ಕ್ರಶರ್ ನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ […]