ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಪಾಮ್‌ ಸಂಡೆ ಆಚರಣೆ

ಉಡುಪಿ: ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್‌ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಬಾರ್ಕೂರಿನ ಸಂತ ಪೀಟರ್‌ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಫಿಲಿಪ್‌ ನೆರಿ ಆರಾನ್ಹಾ, ಅತಿಥಿ ಧರ್ಮಗುರು ವಂ| ಚಾರ್ಲ್ಸ್‌ ಸಲ್ಡಾನಾ ಉಪಸ್ಥಿತರಿದ್ದರು. ಉಡುಪಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರು […]