ರಂಗ ನಿರ್ದೇಶಕ ಮಂಡ್ಯ ರಮೇಶ್‌ಗೆ ಪಂಚಮಿ ಪುರಸ್ಕಾರ ಪ್ರದಾನ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದ ಎರಡನೇ ದಿನವಾದ ಶುಕ್ರವಾರ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮಂಡ್ಯ ರಮೇಶ್ ಮಾತನಾಡಿ, ರಂಗ ಕಲಾವಿದ ಆಗುವುದು ಸುಲಭದ ಕೆಲಸ ಅಲ್ಲ. ಅದು ಸಾಹಸ ಕಾರ್ಯವಾಗಿದೆ. ಗಾಂಧಿಯನ್ನು ಬದಲಾಯಿಸಿರುವುದು ಇದೇ ರಂಗಭೂಮಿ. ಜಗತ್ತಿನ […]