27 ವರ್ಷಗಳ ಬಳಿಕ‌ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪರಾಕ್ರಮ: ಭದ್ರಾವತಿ ನಗರಸಭೆಯೂ ಕೈ ವಶ

ಶಿವಮೊಗ್ಗ: ಕಳೆದ 27 ವರ್ಷ ನಂತರ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಿದೆ. 15 ವಾರ್ಡ್ ಗಳ ಪೈಕಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 6 ಸ್ಥಾನಗಳಲ್ಲಿ‌ ಜಯಗಳಿಸಿದೆ. ಬಿಜೆಪಿ ಶಾಸಕ ಆರಗ‌ ಜ್ಞಾನೇಂದ್ರ , ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಖುದ್ದು ಚುನಾವಣೆ ಪ್ರಚಾರ ನಡೆಸಿದ್ದರು. ಆದರೂ ಬಹುಮತ ಪಡೆಯಲು‌ ಬಿಜೆಪಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್‌ನಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಈಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧ್ಯಕ್ಷ […]