ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ 6 ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ತಹಶೀಲ್ದಾರ್‌ಗೆ ಮನವಿ
ಕಾರ್ಕಳ: ತಾಲ್ಲೂಕಿನ ಬೈಲೂರು ಉಮಿಕ್ಕಳ ಬೆಟ್ಟದ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ ಎಂದು 6 ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಎರ್ಲಪಾಡಿ, ನೀರೆ, ಬೈಲೂರು, ಪಳ್ಳಿ, ಕುಕ್ಕುಂದೂರು, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ತಹಶೀಲ್ದಾರ್ ಡಾ.ಪ್ರತಿಭಾ ಆರ್. ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಪ್ರವಾಸೋದ್ಯಮ ದೃಷ್ಟಿಯಲ್ಲಿ ಅತಿ ಮಹತ್ವದ್ದೆನಿಸಿದೆ. ಹೀಗಾಗಿ ಬಾಕಿಯಿರುವ ಕಾಮಗಾರಿ ಆರಂಭಿಸಿ ಶೀಘ್ರ […]
ಕಾರ್ಕಳ: ಸಾಂಸ್ಕೃತಿಕ ವೈಭವ ಕಾರ್ಯಕ್ರಮ
ಉಡುಪಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ರವಿವಾರ ಕಾರ್ಕಳ ಬೈಲೂರು ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ನಡೆಯಿತು. ಯಕ್ಷರಂಗಾಯಣ ಅಧ್ಯಕ್ಷ ಜೀವನ್ ರಾಂ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ, ಎರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ […]
ಕಾರ್ಕಳ: ಟೀಮ್ ನೇಶನ್ ಫಸ್ಟ್ ವತಿಯಿಂದ ಪರಶುರಾಮ ದೌಡ್
ಕಾರ್ಕಳ: ಉಮಿಕಳ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಕಾರ್ಕಳದಿಂದ ಪರಶುರಾಮ ಥೀಮ್ ಪಾರ್ಕ್ ವರೆಗೆ ಟೀಮ್ ನೇಶನ್ ಫಸ್ಟ್ ವತಿಯಿಂದ ಪರಶುರಾಮ ದೌಡ್ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜೋಡುರಸ್ತೆಯಲ್ಲಿ ಭರ್ಜರಿಯಾಗಿ ಸ್ವಾಗತಿಸಿದರು. ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ನ ವತಿಯಿಂದ ತಂಪು ಪಾನೀಯ ಹಾಗೂ ಫಲಾಹಾರದ ವ್ಯವಸ್ಥೆ ಮಾಡಲಾಯಿತು. ಸಚಿವ ಸುನೀಲ್ ಕುಮಾರ್, ಪೂರ್ಣಿಮಾ ಸಿಲ್ಕ್ ನ ಮಾಲೀಕ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ರವಿಪ್ರಕಾಶ್ ಪ್ರಭು ಇವರಿಗೆ ಶಾಲು ಹೊದಿಸಿ […]
ಜ.19 ರಂದು ಪರಶುರಾಮ ದೌಡ್
ಕಾರ್ಕಳ: ಜ.19 ರಂದು ಪರಶುರಾಮ ದೌಡ್ ಆಯೋಜಿಸಲಾಗಿದ್ದು, ಮಧ್ಯಾಹ್ನ 2.30 ಕಾರ್ಕಳ ಮುಖ್ಯ ಬಸ್ ನಿಲ್ದಾಣದಿಂದ ಹೊರಟು ಸಂಜೆ 6 ಗಂಟೆಗೆ ಪರಶುರಾಮ ಥೀಮ್ ಪಾರ್ಕ್ ಗೆ ತಲುಪಲಿದೆ. ಜ.27 ರಂದು ಪರಶುರಾಮ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು, ಅಂದು ಶಂಖನಾದ ಮೊಳಗಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಜ.21 ರೊಳಗೆ 8050175917 ಈ ಸಂಖ್ಯೆಗೆ ವಾಟ್ಸಾಪ್ ಮಾಡಿ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9845333471, 9945666417, 8749009794, 9845117643, 9844173421 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.