ಮಾ.3ರಿಂದ 6ರ ವರೆಗೆ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟಿರುವ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ, ಸೌಖ್ಯವನ ಪರೀಕ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾರಂಭವು ಮಾರ್ಚ್ 3ರಿಂದ 6ರವರೆಗೆ ನಡೆಯಲಿದೆ ಎಂದು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ ಸೀತಾರಾಮ ತೋಳ್ವಾಡಿತ್ತಾಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ವೇದಮೂರ್ತಿ ಹೆರ್ಗ ಜಯರಾಮ ತಂತ್ರಿ‌ ಅವರ ನೇತೃತ್ವದಲ್ಲಿ […]