ಪರಿಸರ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರ- ರಘುಪತಿ ಭಟ್

ಉಡುಪಿ: ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದ್ದು, ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದುದು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಸೋಮವಾರ, ಅಜ್ಜರಕಾಡು ಪುರಭವನದ ಮಿನಿ ಸಭಾಂಗಣದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಚತೆಯ ಕುರಿತು ಬಿಡುವಿಲ್ಲದೆ ನಿರಂತರ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಸೇವೆ ಹಾಗೂ […]