ಪರಿಷತ್ ಫೈಟ್: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ್ ಭಂಡಾರಿಗೆ ಗೆಲುವು

ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ದಕ್ಷಿಣ ಕನ್ನಡ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1274 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಎರಡನೇ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.