ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು ನಿರ್ಮಾಣದ ಕಾಮಗಾರಿ ಆರಂಭ ಮಾಡುವಂತೆ ಸೂಚನೆ ನೀಡಿದರು. ಕಳೆದ ಮಳೆಗಾಲದಲ್ಲಿ ಕೆರೆ ಕಾಮಗಾರಿ ಹಂತದಲ್ಲೇ ಕುಸಿದ ಹಿನ್ನೆಲೆಯಲ್ಲಿ ಹಿರಿಯ ತಾಂತ್ರಿಕ ಪರಿಣಿತರ ಸಲಹೆಯಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಅಭಿಪ್ರಾಯ ಪಡೆದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ […]