ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆ: ಫೆ.23ರಂದು 21ನೇ ವರ್ಷದ ಸಂಭ್ರಮ ‘ಕಲಾ ಸಂಗಮ’

ಉಡುಪಿ: ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ‘ಕಲಾ ಸಂಗಮ’ ಕಾರ್ಯಕ್ರಮವು ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ್ ಹೋಟೆಲ್ ಮಾಲಕರಾದ ಮೋಹನದಾಸ ನಾಯಕ್ ಉದ್ಘಾಟಿಸಲಿದ್ದಾರೆ ಎಂದರು. 2.15ಕ್ಕೆ […]