ಪರ್ಕಳ- ಮಣಿಪಾಲ ರಸ್ತೆ ಕಾಮಗಾರಿ ಶೀಘ್ರ ಆರಂಭಿಸಲು ಕ್ರಮ: ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಜನ ಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು. ಅವರು ಇಂದು ನಗರದ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟಿಯ ಹೆದ್ದಾರಿ 66 ಮತ್ತು 169ಎ ಗೆ ಸಂಬAಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ವಾಹನಗಳ ಹಾಗೂ ಜನಸಾಮಾನ್ಯರು ಸುರಕ್ಷಿತ ಹಾಗೂ ಸುಗಮವಾಗಿ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ […]