ಪಕ್ಷದಲ್ಲಿ ಬೇಗುದಿ : ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ಘೋಷಿಸದ ಬಿಜೆಪಿ

ಭೋಪಾಲ್: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ (PTI) ಪ್ರಮುಖ ವಿಧಾನಸಭಾ ಚುನಾವಣೆಗೆ ಮಧ್ಯಪ್ರದೇಶ ಸಜ್ಜಾಗಿರುವ ನಡುವೆಯೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಬೂದಿಮುಚ್ಚಿದ ಕೆಂಡವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಚುನಾವಣೆ ಎದುರಿಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದ್ದು, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಕಂಗೆಡಿಸಿದೆ. ಆದಿವಾಸಿಗಳ ಪ್ರಾಬಲ್ಯದ ದಿಂಡೋರಿ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಶಿವರಾಜ್ ಸಿಂಗ್, “ನಾನು ಒಳ್ಳೆಯ ಸರ್ಕಾರ ನಡೆಸುತ್ತಿದ್ದೇನೆಯೇ ಅಥವಾ ಕೆಟ್ಟ ಸರ್ಕಾರ ನಡೆಸುತ್ತಿದ್ದೇನೆಯೇ ಎಂದು ನಾನು ಕೇಳಬಯಸುತ್ತೇನೆ. ಈ ಸರ್ಕಾರ ಮುಂದುವರಿಯಬೇಕೇ […]