ಶ್ರೀಕೃಷ್ಣನ ಕರ್ಮಭೂಮಿ ದ್ವಾರಕೆಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಪೌರಾಭಿನಂದನೆ
ಉಡುಪಿ: ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಸುಪ್ರೀಂದ್ರತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿಯಾಗಿ ದ್ವಾರಕ ಕ್ಷೇತ್ರ ಯಾತ್ರೆ ನಡೆಸಿ ಗೋಮತಿ ನದಿ ಸಾಗರ ಸಂಗಮದಲ್ಲಿ ತೀರ್ಥಸ್ಥಾನ ನಡೆಸಿ ಭಕ್ತರೊಂದಿಗೆ ಶ್ರೀಕೃಷ್ಣ ದರ್ಶನ ಮಾಡಿದರು. ಪಲಿಮಾರು ಮಠದ ದ್ವಾರಕ ಶಾಖೆಯಲ್ಲಿ ಸಂಸ್ಥಾನ ಪೂಜೆ ನಡೆಸಿದರು. ಸಂಜೆ ನಡೆದ ಸಮಾರಂಭದಲ್ಲಿ ದ್ವಾರಕೆಯ ಪೌರಾಭಿನಂದನೆಯನ್ನು ಸ್ವೀಕರಿಸಿ ಉಡುಪಿಗೂ ಮಧ್ವಾಚಾರ್ಯರಿಗೂ ಇರುವ ಸಂಬಂಧವನ್ನು ವಿವರಿಸಿ ಪರ್ಯಾಯ ಮಹೋತ್ಸವ ಸಂದರ್ಭ ಉಡುಪಿಗೆ ಬರುವಂತೆ ಆಹ್ವಾನ ನೀಡಿದರು. ದ್ವಾರಕೆಯ ಮಾಜಿ ಮೇಯರ್, ದ್ವಾರಕ ಬ್ರಾಹ್ಮಣ […]