ಉಡುಪಿ ಪರ್ಯಾಯ: ಜಿಲ್ಲಾಡಳಿತದಿಂದ ಅಗತ್ಯ ಸೌಲಭ್ಯ:ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು. ಜ.17-18 ರಂದು ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವು ನಡೆಯಲಿದ್ದು, ಪರ್ಯಾಯ ಮಹೋತ್ಸವಕ್ಕೆ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ […]