ಸಾಮಾನ್ಯ ಪಾಸ್ ಪೋರ್ಟ್ ಗಾಗಿ ರಾಹುಲ್ ಗಾಂಧಿಗೆ ಎನ್.ಒ.ಸಿ ನೀಡಿದ ದೆಹಲಿ ನ್ಯಾಯಾಲಯ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಒಪ್ಪಿಸಿದ್ದು, ಹತ್ತು ವರ್ಷ ಕಾಲಾವಧಿಗೆ ಹೊಸ ಪಾಸ್ ಪೋರ್ಟ್ ನೀಡಲು ಅನುವಾಗುವಂತೆ ನಿರಾಕ್ಷೇಪಣಾ ಪತ್ರಕ್ಕಾಗಿ ದೆಹಲಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಇದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ “ಸಾಮಾನ್ಯ ಪಾಸ್‌ಪೋರ್ಟ್” ನೀಡುವುದಕ್ಕಾಗಿ ದೆಹಲಿ ನ್ಯಾಯಾಲಯವು ಶುಕ್ರವಾರ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರೂಸ್ ಅವೆನ್ಯೂ ನ್ಯಾಯಾಲಯವು […]

ಸುಳ್ಳು ದಾಖಲೆ ಸೃಷ್ಟಿಸಿ ಪಾಸ್ ಪೋರ್ಟ್ ರಚಿಸಿ ವಂಚಿಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಲಿಮಾರು ಗ್ರಾಮದ ರಾಖಿ ವಿನ್‌ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ ಸೋಜರವರ ಹೆಸರನ್ನು ದುರ್ಬಳಕೆ ಮಾಡಿ, ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ತನ್ನದೇ ಭಾವಚಿತ್ರ ಹಾಗೂ ಬೇರೆ ಬೇರೆ ಹೆಸರು ಮತ್ತು ವಿಳಾಸದ ಪಾಸ್‌ಪೋರ್ಟ್ಗಳನ್ನು ಹೊಂದಿದ್ದು, ಸದ್ರಿ ಪಾಸ್‌ಪೋರ್ಟ್ಗಳನ್ನು ಹೊಂದಲು ಪಾವುಲ್ ಡಿಸೋಜಾ […]