ಕುಡುಕ ಗಂಡನನ್ನು ಬಿಟ್ಟು ಮನೆ ಸಾಲ ವಸೂಲಾತಿಗೆ ಬರುತ್ತಿದ್ದ ಯುವಕನ ಜೊತೆ ಮಹಿಳೆ ಮದುವೆ.!

ಪಟನಾ: ಸದಾ ಕುಡಿದು ನಿಂದಿಸುತ್ತಿದ್ದ ಗಂಡನ ತೊರೆದು ಮಹಿಳೆಯೊಬ್ಬರು ಮನೆಗೆ ಸಾಲ ವಸೂಲಿಗೆ ಬರುತ್ತಿದ್ದ ಏಜೆಂಟ್ ಜೊತೆ ಪರಾರಿಯಾಗಿ ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ.ಈ ವಿವಾಹಕ್ಕೆ ಏಜೆಂಟ್ ಕುಟುಂಬ ಸಮ್ಮತಿಸಿದ್ದರೆ, ಮಹಿಳೆಯ ಕುಟುಂಬ ವಿರೋಧ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದೆ. ಏನಿದು ಘಟನೆ?: ಬಿಹಾರದ ಜಮುಯಿ ಜಿಲ್ಲೆಯ ನಿವಾಸಿ ನಕುಲ್ ಶರ್ಮಾರನ್ನು ಇಂದಿರಾ 2022ರಲ್ಲಿ ವಿವಾಹವಾದರು. ಆದರೆ ನಕುಲ್ ಸದಾ ಕುಡಿದು ಇಂದಿರಾಳಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ನಕುಲ್ ಮನೆಗೆ ಭೇಟಿ ನೀಡುತ್ತಿದ್ದ ಹಣಕಾಸು ಕಂಪನಿಯ ಲೋನ್ […]